ರಾಜ್ಯ

ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು

ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಇಂದು ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ.

ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು
ಕಾರು ಅಪಘಾತ
Published On :

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.

ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಇಂದು ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇವಸ್ಥಾನದಿಂದ ಮರಳಿ ಬರುವಾಗ ದುರ್ಘಟನೆ

ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅತಿವೇಗ ಅಥವಾ ಚಾಲಕನ ಅಜಾಗರೂಕತೆಯೇ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.