ಜನರಿಂದ 'ಚಪ್ಪಲಿ'ಯಲ್ಲಿ ಹೊಡೆಸ್ತೇನೆ: ಮಾಗಡಿ ತಹಶೀಲ್ದಾರ್ ಗೆ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಆವಾಜ್! ವಿಡಿಯೋ ವೈರಲ್
ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ದೂರುಗಳನ್ನು ಆಲಿಸಿದ ಶಾಸಕರು, ಸಾರ್ವಜನಿಕರು ಹಾಗೂ ಮಾಧ್ಯಮಗಳ ಎದುರೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಗಡಿ: ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಜನರಿಂದ ಚಪ್ಪಲಿಯಲ್ಲಿ ಹೊಡೆಸ್ತೇನೆ ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಹಾಕಿರುವ ಆವಾಜ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ದೂರುಗಳನ್ನು ಆಲಿಸಿದ ಶಾಸಕರು, ಸಾರ್ವಜನಿಕರು ಹಾಗೂ ಮಾಧ್ಯಮಗಳ ಎದುರೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.ಮಾಗಡಿ ತಾಲ್ಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ ವೇಳೆ ಈ ಘಟನೆ ನಡೆದಿದೆ.
ರೈತರ ದೂರುಗಳನ್ನು ಪ್ರಸ್ತಾಪಿಸಿದ ಶಾಸಕರು, ಜನರ ಕೆಲಸಗಳು ಸರಿಯಾಗಿ ಆಗದಿದ್ದರೆ ಜನ ನಿನಗೂ ಹೊಡಿತಾರೆ, ನನಗೂ ಹೊಡಿತಾರೆ. ಸರಿಯಾಗಿ ಕೆಲಸ ಮಾಡಿಸಲು ಆಗದಿದ್ದಕ್ಕೆ ಮೊದಲು ನನಗೆ ಚಪ್ಪಲಿಯಲ್ಲಿ ಹೊಡಿತಾರೆ, ಆಮೇಲೆ ನಿನಗೆ ಹೊಡಿತಾರೆ ಎಂದು ತಹಶಿಲ್ದಾರ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಬೇಜವಾಬ್ದಾರಿತನ, ನಿರ್ಲಕ್ಷ್ಯದಿಂದ ಜನಪ್ರತಿನಿಧಿಯಾಗಿ ನಮ್ಮಂತವರಿಗೆ ಮುಜುಗರವಾಗುತ್ತಿದೆ ಎಂದು ಕಿಡಿಕಾರಿದರು.
ರೈತರು ಕಚೇರಿಗಳಿಗೆ ಅಲೆದಾಡುತ್ತಿರುವ ವಿಷಯ ತಿಳಿದು ಗರಂ ಆದ ಬಾಲಕೃಷ್ಣ, ಜನರನ್ನ ಯಾಕೆ ಹೀಗೆ ಸಾಯಿಸುತ್ತೀರಾ? ಕೆಲಸ ಮಾಡಲು ನಾಚಿಕೆ ಆಗಲ್ವಾ ನಿಮಗೆ? ಎಷ್ಟೋ ಅಧಿಕಾರಿಗಳು ಉತ್ತಮ ಕೆಲಸ ಮಾಡಿ ಹೆಸರುವಾಸಿಯಾಗಿದ್ದಾರೆ. ಆದರೆ ನೀವು ಜನರನ್ನು ಯಾಕೆ ಸತಾಯಿಸುತ್ತಿದ್ದೀರಿ, ಯಾಕೆ ಬೇಕು ನಿಮಗೆ ಈ ಕೆಲಸ? ಎಂದು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಇದೇ ವೇಳೆ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರನ್ನು ಸ್ಮರಿಸಿದ ಶಾಸಕರು, ಐಎಎಸ್ ಅಧಿಕಾರಿ ಡಿಕೆ ರವಿ ಅವರು ತೀರಿಕೊಂಡಾಗ ಜನ ಕಣ್ಣೀರು ಹಾಕಿದ್ದರು. ಅವರು ಮಾಡಿದ ಕೆಲಸ ಹಾಗಿತ್ತು. ಆದರೆ ನೀವು ಹೀಗೆ ಜನರನ್ನು ಸತಾಯಿಸುತ್ತಾ ಹೋದರೆ, ನೀವು ಸತ್ತಾಗ ಯಾರಾದರೂ ಬಂದು ಕಣ್ಣೀರು ಹಾಕುತ್ತಾರಾ? ಎಂದು ಹೇಳುವ ಮೂಲಕ ಕಚೇರಿಗಳಿಗೆ ಜನರನ್ನು ಅಲೆಸದೆ ಆದಷ್ಟು ಬೇಗನೆ ಅವರ ಕೆಲಸಗಳನ್ನು ಮಾಡಿಕೊಡುವಂತೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



