ರಾಜ್ಯ

ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು 1.28 ಕೋಟಿ ರೂ ವೆಚ್ಚದ ಯಂತ್ರ ಬಳಕೆ

ನಗರ ಪಾಲಿಕೆ ರೂ. 1.28 ಕೋಟಿ ವೆಚ್ಚದಲ್ಲಿ ‘ರುದ್ರಾ ಆಕ್ವಾ ಮ್ಯಾಕ್ಸ್’ ಎಂಬ ಕಳೆ ತೆಗೆಯುವ ಯಂತ್ರವನ್ನು ಖರೀದಿಸಿದೆ. ಈ ಯಂತ್ರವು ಒಂದೇ ಬಾರಿ ಗರಿಷ್ಠ 5 ಟನ್‌ಗಳಷ್ಟು ಕಳೆ ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ.

ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು 1.28 ಕೋಟಿ ರೂ ವೆಚ್ಚದ ಯಂತ್ರ ಬಳಕೆ
ಮಡಿವಾಳ ಕೆರೆ
Published On :

ಬೆಂಗಳೂರು: ಬೆಂಗಳೂರು ದಕ್ಷಿಣ ವಲಯದ 208 ಎಕರೆ ವಿಸ್ತೀರ್ಣ ಹೊಂದಿರುವ ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು ಆಧುನಿಕ ತಂತ್ರಜ್ಞಾನದ ಯಂತ್ರವನ್ನು ಬಳಸುವ ಕಾರ್ಯಕ್ಕೆ ಬುಧವಾರ ಚಾಲನೆ ದೊರೆತಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಅನುಮೋದನೆಯಾಗಿದ್ದ ಯೋಜನೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಬುಧವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಮಹೇಶ್ವರ್ ರಾವ್ ಅವರು, ಅಗತ್ಯವಿರುವ ಇತರೆ ಕೆರೆಗಳಲ್ಲಿಯೂ ಈ ಯಂತ್ರವನ್ನು ಬಳಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಪಾಲಿಕೆ ರೂ. 1.28 ಕೋಟಿ ವೆಚ್ಚದಲ್ಲಿ ‘ರುದ್ರಾ ಆಕ್ವಾ ಮ್ಯಾಕ್ಸ್’ ಎಂಬ ಕಳೆ ತೆಗೆಯುವ ಯಂತ್ರವನ್ನು ಖರೀದಿಸಿದೆ. ಈ ಯಂತ್ರವು ಒಂದೇ ಬಾರಿ ಗರಿಷ್ಠ 5 ಟನ್‌ಗಳಷ್ಟು ಕಳೆ ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ.

ಲೈವ್ GPS ಟ್ರ್ಯಾಕಿಂಗ್ ವ್ಯವಸ್ಥೆ, ಸುರಕ್ಷತಾ ಸಂವೇದಕಗಳು ಮತ್ತು ಕ್ಯಾಮೆರಾಗಳನ್ನು ಹೊಂದಿರುವ ಈ ಯಂತ್ರದ ಕಾರ್ಯಾಚರಣೆಯನ್ನು ನಿಯಂತ್ರಣ ಕೊಠಡಿಯಿಂದ ಮೇಲ್ವಿಚಾರಣೆ ಮಾಡಬಹುದಾಗಿದೆ ಎಂದು ಆಯುಕ್ತರು ಇದೇ ವೇಳೆ ಮಾಹಿತಿ ನೀಡಿದರು.

ಮಡಿವಾಳ ಕೆರೆಯನ್ನು ರೂ. 15 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಮಕ್ಕಳ ಆಟದ ಮೈದಾನ, ರಸ್ತೆ ದೀಪಗಳ ಅಳವಡಿಕೆ, ಶೌಚಾಲಯಗಳು, ಸೇತುವೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಹಿಂದೆ ಕೆರೆಯಲ್ಲಿ ದೋಣಿ ವಿಹಾರ ವ್ಯವಸ್ಥೆ ಇತ್ತು. ಆದರೀಗ ಅದು ಸ್ಥಗಿತಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.