ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಗೊರ್ಲತ್ತು ಗ್ರಾಮದ ಬಳಿ ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42ವ) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಗೊರ್ಲತ್ತು ಗ್ರಾಮದ ಬಳಿ ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42ವ) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಯಾಗಿದೆ.

'ಅದು Non-AC ಬಸ್ಸು, ಜೀವ ಕಾಪಾಡಿಕೊಳ್ಳಲು ಸುಲಭವಾಯಿತು': ಚಿತ್ರದುರ್ಗ ಬಸ್ ದುರಂತದಲ್ಲಿ ಬದುಕುಳಿದವರ ಕಥೆ...
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


