ನರೇಗಾದಂತಹ ಜನಪರ ಯೋಜನೆ ಮರುಸ್ಥಾಪನೆಗೆ ಜನಾಗ್ರಹದ ಒತ್ತಡ ಅತ್ಯಗತ್ಯ: ಸಚಿವ ಪ್ರಿಯಾಂಕ್ ಖರ್ಗೆ
ಭೂ ರಹಿತ ಕಾರ್ಮಿಕರಿಗೆ ಉದ್ಯೋಗ ಮತ್ತು ಸಂಪಾದನೆಯ ಭರವಸೆಯನ್ನು ನೀಡುವುದರೊಂದಿಗೆ ಸಣ್ಣ, ಅತಿ ಸಣ್ಣ ರೈತರು ಹೊಸ ಕೃಷಿ ಚಟುವಟಿಕೆಗಳಿಗೂ ನೆರವಾಗಿದೆ, ಅಲ್ಲದೆ ಉಪ ಕಸುಬುಗಳನ್ನು ಕೈಗೊಳ್ಳಲು ನೆರವಾಗುವ ಮೂಲಕ ಹೆಚ್ಚುವರಿ ಆದಾಯಕ್ಕೆ ದಾರಿ ಮಾಡಿಕೊಟ್ಟಿದೆ.

ಬೆಂಗಳೂರು: ನರೇಗಾದಂತಹ ಜನಪರ ಯೋಜನೆಯನ್ನು ಮರುಸ್ಥಾಪಿಸಲು ಜನಾಗ್ರಹದ ಒತ್ತಡ ಅತ್ಯಗತ್ಯವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MNREGA)ಯ ಹೆಸರನ್ನು ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಯೋಜನೆಗೆ ಪ್ರಿಯಾಂಕ್ ಖರ್ಗೆಯವರು ವಿರೋಧ ವ್ಯಕ್ತಪಡಿಸಿದ್ದಾರೆ.
ಭೂ ರಹಿತ ಕಾರ್ಮಿಕರಿಗೆ ಉದ್ಯೋಗ ಮತ್ತು ಸಂಪಾದನೆಯ ಭರವಸೆಯನ್ನು ನೀಡುವುದರೊಂದಿಗೆ ಸಣ್ಣ, ಅತಿ ಸಣ್ಣ ರೈತರು ಹೊಸ ಕೃಷಿ ಚಟುವಟಿಕೆಗಳಿಗೂ ನೆರವಾಗಿದೆ, ಅಲ್ಲದೆ ಉಪ ಕಸುಬುಗಳನ್ನು ಕೈಗೊಳ್ಳಲು ನೆರವಾಗುವ ಮೂಲಕ ಹೆಚ್ಚುವರಿ ಆದಾಯಕ್ಕೆ ದಾರಿ ಮಾಡಿಕೊಟ್ಟಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮ ಪಂಚಾಯಿತಿಯ ತುರುವನಹಳ್ಳಿ ಗ್ರಾಮದ ಅಂಬರೀಶ್ ಅವರು ನರೇಗಾ ಯೋಜನೆಯಡಿ ₹70,000 ಆರ್ಥಿಕ ನೆರವು ಪಡೆದು ಸುಸಜ್ಜಿತ ಕುರಿ ಶೆಡ್ ನಿರ್ಮಿಸಿಕೊಂಡು ಉತ್ತಮ ಆದಾಯ ಪಡೆಯುತ್ತಿದ್ದಾರೆ.
ಹೀಗೆ ಬಹು ಆಯಾಮದಲ್ಲಿ ಗ್ರಾಮೀಣ ಜನರ ಬದುಕನ್ನು ಸದೃಢಗೊಳಿಸುತ್ತಿರುವ ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಬಂದ್ ಮಾಡಿದೆ, ಬದಲಾದ ಯೋಜನೆಯು ಗ್ರಾಮೀಣ ಜನರ ಭರವಸೆಯನ್ನು ಅತಂತ್ರಗೊಳಿಸಿದೆ. ಹೀಗಾಗಿ ನರೇಗಾದಂತಹ ಜನಪರ ಯೋಜನೆಯನ್ನು ಮರುಸ್ಥಾಪಿಸಲು ಜನಾಗ್ರಹದ ಒತ್ತಡ ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



