ರಾಜ್ಯ

ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ!

ಮೃತರನ್ನು ಹರೀಶ್ ಶಾಸ್ತ್ರಿ (39) ಮತ್ತು ಅವರ ತಂದೆ ವೀರಭದ್ರ (80) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದ ಹೊರವಲಯದಲ್ಲಿ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮೃತರನ್ನು ಹರೀಶ್ ಶಾಸ್ತ್ರಿ (39) ಮತ್ತು ಅವರ ತಂದೆ ವೀರಭದ್ರ (80) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಡಿಸೆಂಬರ್ 25 ರಂದು ಸಂಜೆ 6 ಗಂಟೆ ಸುಮಾರಿಗೆ ಕುಟುಂಬವು ತೋಟಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ.

ಪ್ರಾಥಮಿಕ ತನಿಖೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಹರೀಶ್ ಮತ್ತು ವೀರಭದ್ರ ಸ್ಥಳದಲ್ಲೇ ಸಾವಿಗೀಡಾದರೆ, ತೀವ್ರವಾಗಿ ಗಾಯಗೊಂಡ ಕುಟುಂಬದ ಇತರ ಸದಸ್ಯರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.