ನವವಧು ಗಾನವಿ ಆತ್ಮಹತ್ಯೆ ಕೇಸ್: ಪತಿ ಸೂರಜ್ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ; ನವಜೋಡಿಗೆ ಮುಳುವಾಯ್ತಾ ವಿವಾಹ ಪೂರ್ವ ಸಂಬಂಧ?
ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಶ್ರೀಲಂಕಾಗೆ ಹನಿಮೂನ್ಗೆ ತೆರಳಿದ್ದಾಗ ಸೂರಜ್ಗೆ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.

ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ.
ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು.
ಅಲ್ಲಿ ಸೂರಜ್ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಮಗನ ಜೊತೆಯಲ್ಲೇ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಶ್ರೀಲಂಕಾಗೆ ಹನಿಮೂನ್ಗೆ ತೆರಳಿದ್ದಾಗ ಸೂರಜ್ಗೆ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.
ಜಗಳ ವಿಕೋಪಕ್ಕೆ ತೆರಳಿ ಜೋಡಿ ಅರ್ಧದಲ್ಲೇ ಬೆಂಗಳೂರಿಗೆ ವಾಪಸ್ ಆಗಿತ್ತು.ಗಾನವಿ ಬೆಂಗಳೂರಿಗೆ ಮರಳಿದ್ದರೂ ಬೇರೊಬ್ಬನ ಜೊತೆ ವಿವಾಹ ಪೂರ್ವ ಸಂಬಂಧ ಇದ್ದ ಕಾರಣ ಆಕೆಯನ್ನು ಸೂರಜ್ ಕುಟುಂಬ ಸ್ವೀಕರಿಸಲಿಲ್ಲ. ಸೂರಜ್ ಕುಟುಂಬದಿಂದ ಅವಮಾನವಾಗಿದ್ದಕ್ಕೆ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



