ವಿಜಯಪುರ: ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕೃಷ್ಣ ಪ್ಯಾಲೇಸ್ ಹೋಟೆಲ್; Video
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಾಸ್ವಿಯಾಗಿದ್ದಾರೆ.

ವಿಜಯಪುರ: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ಹೋಟೆಲ್ ಹೊತ್ತಿ ಉರಿದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಗ್ನಿ ಅವಘಡದಲ್ಲಿ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



