ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ
ಡಿಸೆಂಬರ್ 31, 2025 ರಂದು ಮಧ್ಯಾಹ್ನ 2 ರಿಂದ ಜನವರಿ 1, 2026 ರಂದು ಬೆಳಿಗ್ಗೆ 10 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಡಿಸೆಂಬರ್ 31, 2025 ರಂದು ಮಧ್ಯಾಹ್ನ 2 ರಿಂದ ಜನವರಿ 1, 2026 ರಂದು ಬೆಳಿಗ್ಗೆ 10 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಅವಧಿಯಲ್ಲಿ ಗಿರಿಧಾಮದಲ್ಲಿ ಅತಿಥಿ ಕೊಠಡಿಗಳಿಗೆ ಮುಂಗಡ ಬುಕಿಂಗ್ ಹೊಂದಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



