ರಾಜ್ಯ

Bus Accident: ಆನೇಕಲ್ ಚಂದಾಪುರದಲ್ಲಿ ಸ್ಲೀಪರ್​ ಕೋಚ್​ ಬಸ್​ಗಳ ನಡುವೆ ಭೀಕರ ಅಪಘಾತ, ಹಲವರಿಗೆ ಗಾಯ; Video

ಚಂದಾಪುರ ಫ್ಲೈಓವರ್ ಮೇಲೆ ಸ್ಲೀಪರ್ ಬಸ್​​ಗಳ ಅಪಘಾತಕ್ಕೀಡಾಗಿದೆ. ಸ್ಲೀಪರ್ ಬಸ್​ಗೆ ಮತ್ತೊಂದು ಸ್ಲೀಪರ್ ಬಸ್ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಬಸ್​ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Bus Accident: ಆನೇಕಲ್ ಚಂದಾಪುರದಲ್ಲಿ ಸ್ಲೀಪರ್​ ಕೋಚ್​ ಬಸ್​ಗಳ ನಡುವೆ ಭೀಕರ ಅಪಘಾತ, ಹಲವರಿಗೆ ಗಾಯ; Video
ಫ್ಲೈಓವರ್ ಮೇಲೆ ಅಪಘಾತ
Published On :

ಬೆಂಗಳೂರು: ಸ್ಲೀಪರ್ ಕೋಚ್​​ ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಸ್ಲೀಪರ್​ ಕೋಚ್​ ಬಸ್​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಚೆನೈ ಕಡೆಗೆ ಹೊರಟಿದ್ದ ಬಸ್ ಹಾಗೂ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್​ಗಳ ನಡುವೆ ಅಪಘಾತ ಸಂಭವಿಸಿದೆ.

ಬಸ್​ ಮುಂಭಾಗ ಸಂಪೂರ್ಣ ಜಖಂ

ಚಂದಾಪುರ ಫ್ಲೈಓವರ್ ಮೇಲೆ ಸ್ಲೀಪರ್ ಬಸ್​​ಗಳ ಅಪಘಾತಕ್ಕೀಡಾಗಿದೆ. ಸ್ಲೀಪರ್ ಬಸ್​ಗೆ ಮತ್ತೊಂದು ಸ್ಲೀಪರ್ ಬಸ್ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಬಸ್​ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅತಿ ವೇಗವೇ ಅಪಘಾತಕ್ಕೆ ಕಾರಣ

ಎರಡೂ ಬಸ್​ಗಳು ಅತಿ ವೇಗವಾಗಿ ಚಲಿಸುತ್ತಿದ್ದ ಪರಿಣಾಮ ಚಾಲಕರ ನಿಯಂತ್ರಣ ಕಳೆದುಕೊಂಡ ಬಸ್​​ಗಳು ಡಿಕ್ಕಿಯಾಗಿದೆ. ಅಪಘಾತದಿಂದ ಎರಡು ಬಸ್​ಗಳು ಜಖಂಗೊಂಡಿದೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.