ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ಎರಡು ದಿನ ವಿಶ್ರಾಂತಿಗೆ ವೈದ್ಯರ ಸೂಚನೆ
ಸಿದ್ದರಾಮಯ್ಯನವರ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ, ರಾಮನಗರ ಪ್ರವಾಸ ರದ್ದು
ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



