KSRTC ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಭೇಟಿ, ಕಾರ್ಯವೈಖರಿಗೆ ಮೆಚ್ಚುಗೆ
ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ನೇತೃತ್ವದ ಮಹಾರಾಷ್ಟ್ರದ ಅಧಿಕಾರಿಗಳ ತಂಡವು ನಗರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕಾರ್ಯಾಗಾರಕ್ಕೆ ಭೇಟಿ ನೀಡಿತು.

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಗೆ ಹಾಗೂ ಕಾರ್ಯಾಗಾರಕ್ಕೆ ಭಾನುವಾರ ಭೇಟಿ ನೀಡಿದ ಮಹಾರಾಷ್ಟ್ರ ಸರಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು, ನಿಗಮದ ಕಾರ್ಯವೈಖರಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಸರಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ನೇತೃತ್ವದ ಮಹಾರಾಷ್ಟ್ರದ ಅಧಿಕಾರಿಗಳ ತಂಡವು ನಗರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕಾರ್ಯಾಗಾರಕ್ಕೆ ಭೇಟಿ ನೀಡಿತು. ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ನವೀಕರಣ, ಹೆಚ್.ಆರ್.ಎಂ.ಎಸ್, ಇ-ಟೆಕೇಟಿಂಗ್, ಕೆ.ಎಸ್.ಆರ್.ಟಿ.ಸಿ. ಆರೋಗ್ಯ, ರೂ 1 ಕೋಟಿ ಅಪಘಾತ ವಿಮೆ, ಇತರೆ ಉಪಕ್ರಮಗಳ ಬಗ್ಗೆ ಪ್ರತಾಪ್ ಅವರಿಗೆ ಮಾಹಿತಿ ನೀಡಿದರು.
ಬಳಿಕ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್ ಕಾಸ್, ಐರಾವತ ಕ್ಲಬ್ ಕಾಸ್ 2.0, ಅಂಬಾರಿ ಡ್ರೀಮ್ ಕ್ಲಾಸ್, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್, ನಗರ ಸಾರಿಗೆ, ರಾಜಹಂಸ ಹಾಗೂ ಅಶ್ವಮೇಧ ವಾಹನಗಳನ್ನು ವೀಕ್ಷಿಸಿದರು.
ಘಟಕ ಹಾಗೂ ಕಾರ್ಯಾಗಾರ ನಿರ್ವಹಣೆ, ವಾಹನಗಳಿಗೆ ನೀಡಿರುವ ಬ್ರಾಂಡಿಗ್ ಹಾಗೂ ವಾಹನಗಳ ಪುನಶ್ಚೇತನ ಕಾರ್ಯ ಹಾಗೂ ಹಲವು ಉಪಕ್ರಮಗಳ ಕುರಿತು ಮುಕ್ತ ಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬೆಂ.ಮ.ಸಾ. ಸಂಸ್ಥೆ, ಹಾಗೂ ಮಾನ್ಯ ನಿರ್ದೇಶಕರು (ಸಿ ಮತ್ತು ಜಾ), ಅಪರ ಸಾರಿಗೆ ಆಯುಕ್ತರು, (ಪ್ರವರ್ತನ) (ದಕ್ಷಿಣ), ಹಾಗೂ ಎಂ.ಎಸ್.ಆರ್.ಟಿ.ಸಿ. ತಾಂತ್ರಿಕ, ಸಂಚಾರ ಹಾಗೂ ಕಾಮಗಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



