ಬೆಂಗಳೂರು ವಿವಿ ಹಾಸ್ಟೆಲ್ನಲ್ಲಿ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್.ಪಾವನ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್.ಪಾವನ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪಾವನ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದು. ನಾನು ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ವಿದ್ಯಾರ್ಥಿನಿ ಪಾವನ ಶವ ಶಿಫ್ಟ್ ಮಾಡಲಾಗಿದ್ದು, ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



