ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿವಕುಮಾರ್
ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ" ಎಂದು ಹೇಳಿದರು.

ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು. ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ.
ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ" ಎಂದು ಹೇಳಿದರು.
ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ. ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



