ರಾಜ್ಯ

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ, ಗ್ರಾಮದಲ್ಲಿ ಸ್ಮಶಾನ ಮೌನ!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ, ಗ್ರಾಮದಲ್ಲಿ ಸ್ಮಶಾನ ಮೌನ!
Published On :

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.

ಮೃತರನ್ನು ಯಾದಗಿರಿಯ ಶಹಾಪುರದ ಹಳಿಸಗರ ನಿವಾಸಿಗಳಾದ ಆಂಜನೇಯ(35) ಗಂಗಮ್ಮ(28) ಮತ್ತು ಅವರ ಪುತ್ರ 1 ವರ್ಷದ ಹನುಮಂತು ಮತ್ತು ಸಹೋದರನ ಮಕ್ಕಳಾದ ಪವಿತ್ರ(5) ಮತ್ತು ರಾಯಪ್ಪ(3) ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.