ಯಾದಗಿರಿ: ವಡಗೇರ ಬಳಿ ಕೆಕೆಆರ್ಟಿಸಿ ಬಸ್ ಪಲ್ಟಿ; 15 ಮಂದಿಗೆ ಗಾಯ
ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ: ಯಾದಗಿರಿ ಜಿಲ್ಲೆ ವಡಗೇರ ಪಟ್ಟಣದ ಬಳಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಕೆಆರ್ಟಿಸಿ) ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.
ಇಂದು ಮಧ್ಯಾಹ್ನ ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ಮಧ್ಯೆ ಸ್ಕೀಡ್ ಆಗಿ ಬಿದ್ದಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



