ರಾಜ್ಯ

ಬೆಂಗಳೂರು: ಪೊಲೀಸರ ಸೋಗಿನಲ್ಲಿ BWSSB ಗುತ್ತಿಗೆ ನೌಕರನ ಮೇಲೆ ಹಲ್ಲೆ, ದರೋಡೆ

ಕಾರಿನಲ್ಲಿ ಚನ್ನಪಟ್ಟಣದ ಮಾಲೂರಿಗೆ ತೆರಳುತ್ತಿದ್ದಾಗ ಪೊಲೀಸರ ವೇಷದಲ್ಲಿ ಬೈಕ್ ನಲ್ಲಿ ಬಂದಿರುವ ದುಷ್ಕರ್ಮಿಗಳು, ದಾಖಲೆ ಪರಿಶೀಲಿಸುವ ನೆಪದಲ್ಲಿ ಕಾರು ನಿಲ್ಲಿಸಿದ್ದಾರೆ. ದಾಖಲೆ ತೋರಿಸಲು ಬಾಗಿಲು ತೆಗೆದಾಗ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಪೊಲೀಸರ ಸೋಗಿನಲ್ಲಿ BWSSB ಗುತ್ತಿಗೆ ನೌಕರನ ಮೇಲೆ ಹಲ್ಲೆ, ದರೋಡೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪೊಲೀಸ್ ಸೋಗಿನಲ್ಲಿ ಬಂದಿರುವ ದುಷ್ಕರಮಿಗಳು BWSSB ಗುತ್ತಿಗೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿರುವ ಘಟನೆಯೊಂದು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿರುವ ಜಯಪುರ ಗೇಟ್ ಬಳಿ ಗುರುವಾರ ನಡೆದಿದೆ.

ಹೆಚ್.ಸಿ. ನಾಗೇಶ್ ಹಲ್ಲೆ ಹಾಗೂ ದರೋಡೆಗೊಳಗಾದ ವ್ಯಕ್ತಿಯಾಗಿದ್ದಾರೆ. ಕಾರಿನಲ್ಲಿ ಚನ್ನಪಟ್ಟಣದ ಮಾಲೂರಿಗೆ ತೆರಳುತ್ತಿದ್ದಾಗ ಪೊಲೀಸರ ವೇಷದಲ್ಲಿ ಬೈಕ್ ನಲ್ಲಿ ಬಂದಿರುವ ದುಷ್ಕರ್ಮಿಗಳು, ದಾಖಲೆ ಪರಿಶೀಲಿಸುವ ನೆಪದಲ್ಲಿ ಕಾರು ನಿಲ್ಲಿಸಿದ್ದಾರೆ. ದಾಖಲೆ ತೋರಿಸಲು ಬಾಗಿಲು ತೆಗೆದಾಗ ಹಲ್ಲೆ ನಡೆಸಿದ್ದಾರೆ. ನಂತರ ಹಣ ಹಾಗೂ ಚಿನ್ನಾಭರಣಗಳನ್ನು ದೋಚಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಹಲ್ಲೆಯಿಂದಾಗಿ ನಾಗೇಶ್ ಅವರ ಕಾಲಿನ ಮೂಳೆ ಮುರಿತವಾಗಿದ್ದು, ಮದ್ದೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪ ಪೊಲೀಸ ಸಮವಸ್ತ್ರ ಧರಿಸಿದ್ದ. ಬೂಟು ಕಾಲುಗಳಿಂದ ಒದ್ದ. ಕಾರಿನಲ್ಲಿ ಸ್ವಲ್ಪ ದೂರ ಕರೆದುಕೊಂಡು ಹಲ್ಲೆ ನಡೆಸಿದ. ಬಳಿಕ ಚಾಕುವಿನಿಂದ ಬೆದರಿಸಿ, ಹಣ ಹಾಗೂ ಚಿನ್ನಾಭರಣವನ್ನು ಕಸಿದು, ಬೈಕ್ ನಲ್ಲಿ ಪರಾರಿಯಾದ ಎಂದು ಪೊಲೀಸರಿಗೆ ನೀಡಿದ ನಾಗೇಶ್ ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.