ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು BJP ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಆಯುಕ್ತರು!
ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಅವರು ವಾರ್ಡ್ ನಂ.41ರ ಸದಸ್ಯ ಮಂಗೇಶ ಪವಾರ ಹಾಗೂ ವಾರ್ಡ್ ನಂ.23ರ ಜಯಂತ ಜಾಧವ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ: ತಮ್ಮ ಪತ್ನಿಯರ ಹೆಸರಿನಲ್ಲಿ ಮಹಾನಗರ ಪಾಲಿಕೆಯ ಮಳಿಗೆಗಳನ್ನು ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಅವರು ವಾರ್ಡ್ ನಂ.41ರ ಸದಸ್ಯ ಮಂಗೇಶ ಪವಾರ ಹಾಗೂ ವಾರ್ಡ್ ನಂ.23ರ ಜಯಂತ ಜಾಧವ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
ತಿಂಡಿ ಮಳಿಗೆಗಳ ಹರಾಜಿನಲ್ಲಿ ಸದಸ್ಯ ಮಂಗೇಶ ಪವಾರ ಅವರು ತಮ್ಮ ಪತ್ನಿ ನೀತಾ ಪವಾರ ಹಾಗೂ ಜಯಂತ ಜಾಧವ ಅವರು ತಮ್ಮ ಪತ್ನಿ ಸೋನಾಲಿ ಜಾಧವ ಅವರ ಹೆಸರಿನಲ್ಲಿ ಮಳಿಗೆಗಳನ್ನು ಬಾಡಿಗೆಗೆ ಪಡೆದಿದ್ದರು. ಪಾಲಿಕೆ ಸದಸ್ಯರಾಗುವ ಮುನ್ನವೇ ಅವರು ಬಾಡಿಗೆ ಪಡೆದುಕೊಂಡಿದ್ದರು. ಸದಸ್ಯರಾಗಿ ಆಯ್ಕೆಯಾದ ಬಳಿಕವೂ ಅದನ್ನು ವಾಪಸ್ ನೀಡಿರಲಿಲ್ಲ. ಹೀಗಾಗಿ ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ 2023ರ ನವೆಂಬರ್ 9ರಂದು ದೂರು ನೀಡಿ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸುವ ಮನವಿ ಮಾಡಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಇದೀಗ ಪಾಲಿಕೆ ಸದಸ್ಯತ್ವ ರದ್ದುಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


