ರಾಜ್ಯ

ಸಕಲೇಶಪುರ: ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ; 14 ಮಂದಿಗೆ ಗಂಭೀರ ಗಾಯ

ತಮಿಳುನಾಡಿನ ಸೇಲಂ ನಿಂದ ಮಡಿಕೇರಿ ಜಿಲ್ಲೆಯ ಶನಿವಾರಸಂತೆಯ ಬಳಿಯ ಕಾಫಿ ಎಸ್ಟೇಟೊಂದಕ್ಕೆ ಕಾಫಿ ಕುಯ್ಲಿಗೆ ಬರುತ್ತಿದ್ದಾಗ ಘಟನೆ ನಡೆದಿದೆ.

ಸಕಲೇಶಪುರ: ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ; 14 ಮಂದಿಗೆ ಗಂಭೀರ ಗಾಯ
ಸಕಲೇಶಪುರ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ
Published On :

ಹಾಸನ : ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದು ಹಲವು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ನಿಡನೂರು ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ತಮಿಳುನಾಡಿನ ಸೇಲಂ ನಿಂದ ಮಡಿಕೇರಿ ಜಿಲ್ಲೆಯ ಶನಿವಾರಸಂತೆಯ ಬಳಿಯ ಕಾಫಿ ಎಸ್ಟೇಟೊಂದಕ್ಕೆ ಕಾಫಿ ಕುಯ್ಲಿಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಒಂದು ಪುಟ್ಟ ಮಗು ಸೇರಿದಂತೆ 14 ಜನ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅಪಘಾತ ರಭಸಕ್ಕೆ ಕೂಲಿ ಕಾರ್ಮಿಕರ ಬಟ್ಟೆ, ಪಾತ್ರೆ, ಆಹಾರ ಸಾಮಾಗ್ರಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದವು.

ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.