"ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಿದ್ದೇ ನೀವು, ದರ ಕಡಿಮೆ ಮಾಡಲು ನಿಮ್ಮನ್ನು ತಡೆಯುತ್ತಿರುವುದು ಏನು?": CM ಗೆ Tejasvi Surya
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ವಿಷಯವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಮೆಟ್ರೋ ಪ್ರಯಾಣ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟನೆಯ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.
"2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ.
ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ" ಎಂದು ಹೇಳಿದ್ದಾರೆ.
ಪ್ರಯಾಣದ ದರ ಏರಿಕೆಯಿಂದ ಬೆಂಗಳೂರಿನ ಜನತೆಗೆ ಉಂಟಾಗುವ ತೊಂದರೆಗಳ ಅರಿತು ಬಿಜೆಪಿ ದರ ಏರಿಕೆಯನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ ಎಂದು ಹೇಳಿರುವ ಸಂಸದ ತೇಜಸ್ವಿ, ಮುಖ್ಯಮಂತ್ರಿಗಳಿಗೆ ಈ ಸಮಸ್ಯೆ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಪರಿಷ್ಕೃತ ದರಗಳ ಏರಿಕೆಯನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಲು ನೆರವಾಗಬೇಕು, ದರ ಕಡಿಮೆ ಮಾಡಲು ನಿಮ್ಮನ್ನು ಯಾವ ಕಾನೂನು ಅಡ್ಡಿಪಡಿಸುವುದಿಲ್ಲ. ಬೆಂಗಳೂರಿನ ಸಂಸದರು ಹಾಗೂ ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಅಧಿಕಾರಿಗಳು ಬೆಂಗಳೂರಿನ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ತಮಗೆ ಸಲಹೆ ಮತ್ತು ಸಹಕಾರ ನೀಡಲು ಸಿದ್ದರಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



