ಬೆಂಗಳೂರು: ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಶಾಲಾ ಬಾಲಕಿ ಆತ್ಮಹತ್ಯೆ
ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ SSLC ಪರೀಕ್ಷೆ ಹತ್ತಿರ ಬರುತ್ತಾ ಇದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



