ರಾಜ್ಯ

Work from home ಅಲ್ಲ Work from car: ಐಟಿ ಮಹಿಳೆಗೆ ಬಿತ್ತು ದಂಡ

ಆರ್‌ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Work from home ಅಲ್ಲ Work from car: ಐಟಿ ಮಹಿಳೆಗೆ ಬಿತ್ತು ದಂಡ
ಕಾರಿನಲ್ಲಿ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿರುವ ಮಹಿಳೆ.
Published On :

ಬೆಂಗಳೂರು: ಕಾರು ಚಾಲನೆ ವೇಳೆ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಆರ್‌ಟಿ ನಗರ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.

ಆರ್‌ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಕಾರು ಚಾಲನೆ ಮಾಡುವಾಗ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಿಳಾ ಚಾಲನೆ ಮಾಡುತ್ತಿದ್ದ ಕಾರಿನ ನಂಬರ್ ಪ್ಲೇಟ್ ವಿಡಿಯೋದಲ್ಲಿ ಪತ್ತೆಯಾಗಿದ್ದು, ಇದನ್ನು ಪರಿಶೀಲಿಸಿ ಪೊಲೀಸರು ಮಹಿಳೆಯನ್ನು ಪತ್ತೆ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಮಹಿಳೆಗೆ 1,000 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಉತ್ತರ ವಿಭಾಗದ ಡಿಸಿಪಿ (ಸಂಚಾರ) ಮನೆಯಿಂದಲೇ ಕೆಲಸ ಮಾಡಿ, ಚಾಲನೆ ವೇಳೆ ನಿಮ್ಮ ಕಾರಿನಿಂದಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಮಹಿಳೆಯ ವಿಡಿಯೋ ಹಾಗೂ ದಂಡ ಹಾಕಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.