ರಾಜ್ಯ

HAL ನಿರ್ಮಿತ ಸ್ವದೇಶಿ ತರಬೇತಿ ವಿಮಾನದಲ್ಲಿ ತೇಜಸ್ವಿ ಸೂರ್ಯ ಹಾರಾಟ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ನಿರ್ಮಿಸಿದ ವಿಮಾನದಲ್ಲಿ ತೇಜಸ್ವಿ ಸೂರ್ಯ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಗಮನ ಸೆಳೆದರು.

HAL ನಿರ್ಮಿತ ಸ್ವದೇಶಿ ತರಬೇತಿ ವಿಮಾನದಲ್ಲಿ ತೇಜಸ್ವಿ ಸೂರ್ಯ ಹಾರಾಟ
HAL-ನಿರ್ಮಿತ ಸ್ಥಳೀಯ ತರಬೇತಿ ವಿಮಾನ HTT-40 ನಲ್ಲಿ ತೇಜಸ್ವಿ ಸೂರ್ಯ ಹಾರಾಟ
Published On :

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ-2025 ರಲ್ಲಿ ವೈಮಾನಿಕ ಪ್ರದರ್ಶನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ ಸ್ವದೇಶಿ ನಿರ್ಮಿತ ತರಬೇತಿ ವಿಮಾನವಾದ HTT-40ಯಲ್ಲಿ ಹಾರಾಟ ನಡೆಸಿದರು.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ನಿರ್ಮಿಸಿದ ವಿಮಾನದಲ್ಲಿ ತೇಜಸ್ವಿ ಸೂರ್ಯ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಗಮನ ಸೆಳೆದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಸಂಸದ, HAL ಬೆಂಗಳೂರಿನ ಹೆಮ್ಮೆ ಮತ್ತು ಭಾರತದ ಹೆಮ್ಮೆ ಮತ್ತು ಭಾರತದ ವೈಮಾನಿಕ ಪ್ರಗತಿಯ ಸಂಕೇತ ಎಂದು ಶ್ಲಾಘಿಸಿದರು.

"ಇಂದು ನನಗೆ ನಮ್ಮದೇ HAL ನಿರ್ಮಿಸಿದ HTT 40 ನಲ್ಲಿ ಹಾರಾಟ ನಡೆಸುವ ಅವಕಾಶ ಸಿಕ್ಕಿತು. HAL ಭಾರತದ ಹೆಮ್ಮೆ. ಇದು ಬೆಂಗಳೂರಿನ ಹೆಮ್ಮೆ" ಎಂದು ಹೇಳಿದರು.

2012 ರಲ್ಲಿ ಯುಪಿಎ ಸರ್ಕಾರವು ಸ್ವಿಸ್ ಕಂಪನಿಯಿಂದ ತರಬೇತಿ ಜೆಟ್‌ಗಳನ್ನು ಖರೀದಿಸಿತ್ತು. ಇದರಿಂದ ದೇಶಿಯ ವಿಮಾನ ತಯಾರಿಕಾ ಯೋಜನೆ ಭಾರಿ ಹಿನ್ನೆಡೆ ಅನುಭವಿಸಿತ್ತು. ಆದರೆ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಎಚ್ಎಎಲ್ ಗೆ ಉತ್ತೇಜನ ಲಭಿಸಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.