ರಾಜ್ಯ

ಹಾಸನ: ರೈಲ್ವೆ ಜಂಕ್ಷನ್ ಬಳಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಅಪರಿಚಿತ ಮಹಿಳೆಯ ಮೇಲೆ ಕೋಣೆಯೊಂದರಲ್ಲಿ ಅತ್ಯಾಚಾರವೆಸಗಿದ ದುಷ್ಕರ್ಮಿ ನಂತರ, ಇಟ್ಟಿಗೆಗಳಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಹಾಸನ: ರೈಲ್ವೆ ಜಂಕ್ಷನ್ ಬಳಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಸಾಂದರ್ಭಿಕ ಚಿತ್ರ
Published On :

ಹಾಸನ: ಹಾಸನ ರೈಲ್ವೆ ಜಂಕ್ಷನ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್ ಕಟ್ಟಡದಲ್ಲಿ 40 ವರ್ಷದ ಅಪರಿಚಿತ ಮಹಿಳೆಯ ಶವ ಗುರುವಾರ ಸಂಜೆ ಪತ್ತೆಯಾಗಿದೆ

ಅಪರಿಚಿತ ಮಹಿಳೆಯ ಮೇಲೆ ಕೋಣೆಯೊಂದರಲ್ಲಿ ಅತ್ಯಾಚಾರವೆಸಗಿದ ದುಷ್ಕರ್ಮಿ ನಂತರ, ಇಟ್ಟಿಗೆಗಳಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ಇನ್ನೂ ಸಂತ್ರಸ್ತೆಯ ಗುರುತು ಪತ್ತೆಯಾಗಿಲ್ಲ.

ಪೊಲೀಸರು ಶವವನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ (HIMS) ಶವಾಗಾರಕ್ಕೆ ಸ್ಥಳಾಂತರಿಸಿದ್ದು, ಆಕೆಯ ಗುರುತು ಪತ್ತೆಗೆ ಪ್ರಯತ್ನ ನಡೆಸುತ್ತಿದ್ದಾರೆ.

ಮೂಲವೊಂದರ ಪ್ರಕಾರ, ಸಂತ್ರಸ್ತೆ ನೆರೆಯ ರಾಜ್ಯದಿಂದ ವಲಸೆ ಬಂದಿರಬಹುದು ಮತ್ತು ಅದೇ ಕಟ್ಟಡ ನಿರ್ಮಾಣ ಸ್ಥಳದಲ್ಲಿ ನಿರ್ಮಾಣ ಕೆಲಸಗಾರನಾಗಿ ಕೆಲಸ ಮಾಡುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಸಾಕ್ಷಿ ಸಂಗ್ರಹಿಸಲು ಬೆರಳಚ್ಚು ತಜ್ಞರು ಮತ್ತು ಶವ ನಿಗಾ ಘಟಕ ಸ್ಥಳಕ್ಕೆ ಆಗಮಿಸಿದೆ. ರೈಲ್ವೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.