ರಾಜ್ಯ

ರೈತ ಮುಖಂಡ ಕುರುಬೂರು ಶಾಂತಕುಮಾರ್ ಚಂಡೀಗಢದಿಂದ ಬೆಂಗಳೂರಿಗೆ ಏರ್ ಲಿಫ್ಟ್: ಮಣಿಪಾಲ್ ಆಸ್ಪತ್ರೆಗೆ ದಾಖಲು

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಶಾಂತಕುಮಾರ್, ಪಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರೈತ ಮುಖಂಡ ಕುರುಬೂರು ಶಾಂತಕುಮಾರ್ ಚಂಡೀಗಢದಿಂದ ಬೆಂಗಳೂರಿಗೆ ಏರ್ ಲಿಫ್ಟ್: ಮಣಿಪಾಲ್ ಆಸ್ಪತ್ರೆಗೆ ದಾಖಲು
ಕುರುಬೂರು ಶಾಂತಕುಮಾರ್
Published On :

ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಭಾನುವಾರ ಬೆಂಗಳೂರಿಗೆ ಕರೆತರಲಾಗಿದೆ.

ಇದೀಗ ಶಾಂತಕುಮಾರ್ ಅವರನ್ನು ಚಿಕಿತ್ಸೆಗಾಗಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಶಾಂತಕುಮಾರ್, ಪಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಬೆನ್ನುಮೂಳೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸಿದ್ದರಾಮಯ್ಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಈ ಮಧ್ಯೆ, ಕರ್ನಾಟಕ ಭವನ, ದೆಹಲಿಯ ನಿವಾಸಿ ಆಯುಕ್ತ ಇಮ್ಕೊಂಗ್ಲಾ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪಟಿಯಾಲಾ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಅಧಿಕಾರಿಗಳು ಶನಿವಾರ ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದರು. ವೈದ್ಯರು ಮತ್ತು ಇಬ್ಬರು ಸಹಾಯಕರ ತಂಡದೊಂದಿಗೆ ಶಾಂತಕುಮಾರ್ ಅವರನ್ನು ಇಂದು ಬೆಂಗಳೂರಿಗೆ ಕರೆತರಲಾಯಿತು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.