ರಾಜ್ಯ

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

4 ಲಕ್ಷ ರೂ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ
ಸಾಂದರ್ಭಿಕ ಚಿತ್ರ
Published On :

ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪ ಸಂಬಂಧ 18 ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ‌ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್​ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಇದರಲ್ಲಿ ಒಟ್ಟು 329 ಚೀಲಗಳಲಿದ್ದ 8 ಟನ್ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಬಂಧಿತರನ್ನು ಧಾರವಾಡದ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದಗೌಸ್​ ಖಲೀಪಾ,‌ ಗೌತಮಸಿಂಗ​ ಠಾಕೂರ್​, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದಂತೆ 18‌ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ಪದಾರ್ಥಗಳ ಅಕ್ರಮ ಸಂಗ್ರಹ ಹಾಗೂ ಮಾರಾಟ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದಾಗ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.