ರಾಜ್ಯ

ನಾನು ಸಹನಾ- ಅತ್ತೆ ಸಾಯ್ಸೋಕೆ 2 ಮಾತ್ರೆ ಕೊಡಿ; ವಾಟ್ಸಾಪ್ ಸಂದೇಶ ನೋಡಿ ಡಾಕ್ಟರ್ ಬೇಸ್ತು!

ಬೆಂಗಳೂರು ಮೂಲದ ವೈದ್ಯರಾದ ಡಾ. ಸುನಿಲ್​ ಕುಮಾರ್​ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಓರ್ವ ಮಹಿಳೆ ಪರಿಚಯವಾಗಿದ್ದಾಳೆ. ಮಹಿಳೆ ಇನ್​ಸ್ಟಾಗ್ರಾಮ್​ ಮೂಲಕ ಡಾ. ಸುನಿಲ್​ ಕುಮಾರ್​ ಅವರ ದೂರವಾಣಿ ಸಂಖ್ಯೆ ಪಡೆದಿದ್ದಾಳೆ.

ನಾನು ಸಹನಾ- ಅತ್ತೆ ಸಾಯ್ಸೋಕೆ 2 ಮಾತ್ರೆ ಕೊಡಿ; ವಾಟ್ಸಾಪ್ ಸಂದೇಶ ನೋಡಿ ಡಾಕ್ಟರ್ ಬೇಸ್ತು!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಎಂದು ಸೊಸೆ ವೈದ್ಯರಿಗೆ ವಾಟ್ಸಾಪ್​​ ಸಂದೇಶ ಕಳುಹಿಸಿದ್ದಾಳೆ ಮಹಿಳೆಯೋರ್ವರ ವಾಟ್ಸಾಪ್​ ಸಂದೇಶ ಕಂಡು ಬೆಂಗಳೂರಿನ ವೈದ್ಯರೊಬ್ಬರು ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು ಮೂಲದ ವೈದ್ಯರಾದ ಡಾ. ಸುನಿಲ್​ ಕುಮಾರ್​ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ ಓರ್ವ ಮಹಿಳೆ ಪರಿಚಯವಾಗಿದ್ದಾಳೆ. ಮಹಿಳೆ ಇನ್​ಸ್ಟಾಗ್ರಾಮ್​ ಮೂಲಕ ಡಾ. ಸುನಿಲ್​ ಕುಮಾರ್​ ಅವರ ದೂರವಾಣಿ ಸಂಖ್ಯೆ ಪಡೆದಿದ್ದಾಳೆ. ನಂತರ, ಸೋಮವಾರ (ಫೆಬ್ರವರಿ 17) ರಂದು ಮಹಿಳೆ, ಡಾ. ಸುನಿಲ್​ ಕುಮಾರಿಗೆ ವಾಟ್ಸಾಪ್​ನಲ್ಲಿ ಸಂದೇಶ ಕಳುಹಿಸಿದ್ದಾಳೆ. ಮಹಿಳೆಯ ಸಂದೇಶ ಕಂಡು ವೈದ್ಯರು ಅಚ್ಚರಿಗೊಂಡಿದ್ದಾರೆ.

ಈ ರೀತಿಯಾಗಿ ಮಹಿಳೆ ಮತ್ತು ವೈದ್ಯರ ನಡುವೆ ಸಂಭಾಷಣೆ ನಡೆದಿದೆ. ಸೊಸೆ ಅತ್ತೆಯನ್ನು ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದಾರೆ. ಆ ಬಳಿಕ ಮಹಿಳೆ ಕೂಡಲೇ ಸಂದೇಶಗಳನ್ನು ಡಿಲೀಟ್ ಮಾಡಿದ್ದು, ವೈದ್ಯರ ನಂಬರ್ ಬ್ಲಾಕ್ ಮಾಡಿದ್ದಾರೆ. ಮಹಿಳೆಯ ಸಂದೇಶ ಓದಿ ಶಾಕ್ ಆದ ವೈದ್ಯ ಸುನಿಲ್​ ಕುಮಾರ್​ ಸಂಜಯ್ ನಗರ ಪೊಲೀಸ್​ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ.

Story image

ಸಹನಾ ಎಂಬುವರು ನನಗೆ 17ನೇ ತಾರೀಖು ಮೆಸೇಜ್ ಮಾಡಿದ್ದರು. ಕನ್ನಡದಲ್ಲಿ ಸಂದೇಶ ಕಳುಹಿಸಿ ಮಾತು ಆರಂಭಿಸಿದರು. ನೀವು ನನಗೆ ಬೈಯುವುದಿಲ್ಲ ಎಂದರೆ ನಿಮ್ಮನ್ನು ಒಂದು ಮಾತು ಕೇಳುತ್ತೇನೆ ಎಂದರು. ಬಳಿಕ ಅತ್ತೆ ತುಂಬ ಕಿರುಕುಳ ನೀಡುತಿದ್ದಾರೆ. ಅವರನ್ನು ಸಾಯಿಸಲು ಎರಡು ಮಾತ್ರೆ ಕೊಡಿ ಎಂದರು. ಅದಾದ ಬಳಿಕ ನಾನು ಪ್ರಶ್ನೆ ಮಾಡಿದೆ. ಬಳಿಕ ಎಲ್ಲ ಸಂದೇಶಗಳನ್ನು ಡಿಲೀಟ್ ಮಾಡಿದರು. ಡಿಲೀಟ್ ಆಗುವ ಮೊದಲೇ ನಾನು ಸ್ಕ್ರೀನ್​ಶಾಟ್ ತೆಗೆದುಕೊಂಡಿದ್ದೆ. ಬಳಿಕ ನಾನು ಸಂಜಯನಗರ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದೇನೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.