ಮಾರ್ಚ್ 6ರಂದು ಶಿವಶ್ರೀ ಜೊತೆ ಸಂಸದ ತೇಜಸ್ವಿ ಸೂರ್ಯ ವಿವಾಹ
ಮಾರ್ಚ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ.
ಮಾರ್ಚ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮದುವೆ ಸಮಾರಂಭ ಮುಗಿದ ಬಳಿಕ ಮಾರ್ಚ್ 9ರಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭ ಕೂಡ ನಡೆಯಲಿದೆ. ಅಂದು ಬೆಳಿಗ್ಗೆ 10.30ರಿಂದ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.
ಕಳೆದ ಹಲವು ದಿನಗಳಿಂದ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದು ವಿವಾಹ ತೀರ್ಮಾನಿಸಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



