ರಾಜ್ಯ

ದೊಡ್ಡಬಳ್ಳಾಪುರ: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಯುವಕರು ದುರ್ಮರಣ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ದೊಡ್ಡಬಳ್ಳಾಪುರ: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಯುವಕರು ದುರ್ಮರಣ!
ಸಂಗ್ರಹ ಚಿತ್ರ
Published On :

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ 18 ವರ್ಷದ ರಾಹುಲ್, 20 ವರ್ಷದ ಬಿಕೇಶ್ ಮತ್ತು 24 ವರ್ಷದ ಲಲನ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದಿದ್ದರು. ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.