ರಾಜ್ಯ

ಕೋಲಾರ: ವೇಮಗಲ್ ನಲ್ಲಿ Krones ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ; 550 ಉದ್ಯೋಗ ಸೃಷ್ಟಿ ನಿರೀಕ್ಷೆ

ಕಳೆದವಾರ ಬೆಂಗಳೂರಿನಲ್ಲಿ ಜರುಗಿದ ಜಾಗಕಿತ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಗೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಕೋಲಾರ: ವೇಮಗಲ್ ನಲ್ಲಿ Krones ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ;  550 ಉದ್ಯೋಗ ಸೃಷ್ಟಿ ನಿರೀಕ್ಷೆ
ಎಂಬಿ ಪಾಟೀಲ್ ಮತ್ತಿತರರು
Published On :

ಕೋಲಾರ: ಜರ್ಮನಿ ಮೂಲದ ಪ್ರತಿಷ್ಠಿತ ಪ್ಯಾಕೇಜಿಂಗ್ ಮತ್ತು ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಸಂಸ್ಥೆ ಕ್ರೋನ್ಸ್ ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ರೂ.315 ಕೋಟಿ ವೆಚ್ಚದಲ್ಲಿ ತನ್ನ ಉತ್ಪಾದನಾ ಘಟಕ ನಿರ್ಮಿಸುತ್ತಿದ್ದು, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಇಂದು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಕಳೆದವಾರ ಬೆಂಗಳೂರಿನಲ್ಲಿ ಜರುಗಿದ ಜಾಗಕಿತ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಗೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದೀಗ ತಯಾರಿಕಾ ಘಟಕ ನಿರ್ಮಾಣ ಪ್ರಕ್ರಿಯೆ ಆರಂಭವಾಗಿರುವುದು ಸಂತಸ ತರಿಸಿದೆ ಎಂದರು.

ಉತ್ಪಾದನಾ ಘಟಕ ನಿರ್ಮಾಣದಿಂದ ಸಹಸ್ರಾರು ಉದ್ಯೋಗ ಸೃಷ್ಟಿಯಾಗಲಿದೆ. ನಮ್ಮ ಸರಕಾರ ಅತ್ಯಂತ ತ್ವರಿತವಾಗಿ ಈ ಒಡಂಬಡಿಕೆಯನ್ನು ಅನುಷ್ಠಾನಗೊಳಿಸಿ, ದೇಶಕ್ಕೇ ಮಾದರಿಯಾಗಿದೆ. ನುಡಿದಂತೆ ನಡೆಯುತ್ತಿದ್ದೇವೆ ಎಂದು ತಿಳಿಸಿದರು.

315 ಕೋಟಿ ರೂಪಾಯಿ ಹಣ ಹಂತ ಹಂತವಾಗಿ ಹೂಡಿಕೆ ಆಗಲಿದೆ. ಇದರಿಂದ 550 ಮಂದಿಗೆ ಉದ್ಯೋಗ ಸಿಗಲಿದೆ. ನಿಮಿಷಕ್ಕೆ ನೂರಾರು ಬಾಟಲಿ ಉತ್ಪಾದಿಸುವ ಯಂತ್ರಗಳನ್ನು ಇಲ್ಲಿ ಉತ್ಪಾದಿಸಲಾಗುತ್ತದೆ. ಸ್ಥಳೀಯ ಹಾಗೂ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡಬೇಕೆಂದು ಸಚಿವರು ಕ್ರೋನ್ಸ್‌ ಪ್ರತಿನಿಧಿಗಳಲ್ಲಿ‌ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.