ರಾಜ್ಯ

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು

ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು
ಕಾಶಿಗೆ ತೆರಳುತ್ತಿದ್ದ ವೇಳೆ ಅಪಘಾತ
Published On :

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಗು ಕೂಡ ಮೃತ ಪಟ್ಟಿದೆ.

ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.

ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.