ಫೈನಾನ್ಸ್ ಸಿಬ್ಬಂದಿ ಕಿರುಕುಳ! ಬೆಳಗಾವಿಯಲ್ಲಿ ವಿಷ ಸೇವಿಸಿ ಮತ್ತೋರ್ವ ಆತ್ಮಹತ್ಯೆ
ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಮೃತಪಟ್ಟ ಕಾರ್ಮಿಕರಾಗಿದ್ದಾರೆ.

ಬೆಳಗಾವಿ: ಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಲ್ಲ. ಫೈನಾನ್ಸ್ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಮನೆಯಲ್ಲಿಯೇ ಗುರುವಾರ ರಾತ್ರಿ ವಿಷ ಕುಡಿದಿದ್ದ ಗೋವಿಂದ ಅವರು ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಗೋವಿಂದ ಅವರು ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳ ಖರೀದಿಗೆ ಫೈನಾನ್ಸ್ ನಿಂದ ರೂ. 60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ದಿ ಸಂಘದಿಂದ ರೂ. 1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಇದರೊಂದಿಗೆ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



