ರಾಜ್ಯ

Video: ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ

ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ.

Video: ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ
ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು
Published On :

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡ ಪರಿಣಾಮ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುತ್ತಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ.

ಮಾನವ ಕೃತ್ಯ ಶಂಕೆ

ಇನ್ನು ಹಾಲಿ ಬೆಂಕಿ ಅವಘಡವನ್ನು ಮಾನವ ಕೃತ್ಯ ಎಂದು ಶಂಕಿಸಲಾಗಿದ್ದು, 'ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ' ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ತಾಪ ಹೆಚ್ಚಾಗಿದ್ದು, ಬೇಸಿಗೆ ಆರಂಭವಾಗಿರುವುದರಿಂದ ಕಾಡು ಒಣಗಿದೆ. ಇದೇ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದು ಬೆಂಕಿ ವ್ಯಾಪಿಸಲು ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುತ್ತಿದ್ದು, ಶೀಘ್ರದಲ್ಲೇ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.