ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತ ಪ್ರಕರಣ; ಕ್ಯಾಂಟರ್ ಟ್ರಕ್ ಪತ್ತೆಗೆ ಪೊಲೀಸರ ತೀವ್ರ ಶೋಧ

ಹಿರೇಬಾಗೇವಾಡಿ ಟೋಲ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು 60 ಕ್ಯಾಂಟರ್‌ಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತ ಪ್ರಕರಣ; ಕ್ಯಾಂಟರ್ ಟ್ರಕ್ ಪತ್ತೆಗೆ ಪೊಲೀಸರ ತೀವ್ರ ಶೋಧ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ
Published On :

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆಂಡ್‌ ರನ್ ಮಾಡಿ ಪರಾರಿಯಾಗಿದ್ದ ಕ್ಯಾಂಟರ್ ಟ್ರಕ್‌ಗಾಗಿ ಪೊಲೀಸರ ಹುಡುಕಾಟ ತೀವ್ರಗೊಂಡಿದೆ.

ಜನವರಿ 14 ರಂದು ನಡೆದ ಕಾರು ಅಪಘಾತದಲ್ಲಿ ಸಚಿವೆ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಅವರಿಗೆ ಗಾಯವಾಗಿತ್ತು. ಕಿತ್ತೂರು ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಸಚಿವೆಯ ಬೆನ್ನು ಮೂಳೆಗೆ ಪೆಟ್ಟಾಗಿತ್ತು. 13 ದಿನಗಳ ಬಳಿಕ ಸಚಿವೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಇದುವರೆಗಿನ ತನಿಖೆಯಿಂದ ವಾಹನವು ಪಂಜಾಬ್ ಅಥವಾ ಹರಿಯಾಣದಿಂದ ಬಂದಿದ್ದು ಎಂದು ತಿಳಿದುಬಂದಿದೆ. ಹಿರೇಬಾಗೇವಾಡಿ ಟೋಲ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು 60 ಕ್ಯಾಂಟರ್‌ಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ. ಈಗಾಗಲೇ 30 ಕ್ಯಾಂಟರ್‌ಗಳನ್ನು ಪರಿಶೀಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆ ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ಎಲ್ಲ ಕ್ಯಾಂಟರ್‌ಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಭೀಮಾಶಂಕರ ಗುಳೇದ್ ಹೇಳಿದ್ದಾರೆ.

ಸಚಿವೆಯ ಕಾರು ಚಾಲಕ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಕೇಸ್ ದಾಖಲಿಸಿದ್ದು, ಕ್ಯಾಂಟರ್ ಟ್ರಕ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿತ್ತು ಎಂದು ಸಚಿವೆ ಹೆಬ್ಬಾಳ್ಕರ್ ಕುಟುಂಬಸ್ಥರು ಮೊದಲಿಗೆ ತಿಳಿಸಿದ್ದರು.

ಬೆಳಗಾವಿ ಸಮೀಪದ ಅಂಬಡಗಟ್ಟಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನ ಚಲಾಯಿಸುತ್ತಿದ್ದಾಗ ಸಿಗ್ನಲ್‌ ನೀಡದೆ ಎಡಬದಿಯಲ್ಲಿ ಕ್ಯಾಂಟರ್‌ ಲಾರಿ ಬಂದಿದೆ. ಆಗ ಕಾರಿಗೆ ಕ್ಯಾಂಟರ್ ಸ್ವಲ್ಪ ಡಿಕ್ಕಿಯಾಗಿದೆ. ಹೆಚ್ಚಿನ ಅನಾಹುತವನ್ನು ತಪ್ಪಿಸಲು ಯತ್ನಿಸಿದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಯಾಯಿತು. ಕ್ಯಾಂಟರ್ ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಚಾಲಕ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.