ರಾಜ್ಯ

ಮುಂದುವರಿದ ಸಂಘರ್ಷ: ಮೂರು ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ.

ಮುಂದುವರಿದ ಸಂಘರ್ಷ: ಮೂರು ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು
ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್
Published On :

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಮುಂದುವರಿದಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ. ಈ ತಿದ್ದುಪಡಿಯು ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರ ಮುಖ್ಯಮಂತ್ರಿಗಳಿಗೆ ಸೇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.

ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್​ ಕಳುಹಿಸಿದ್ದಾರೆ.

ರಾಜ್ಯಸರ್ಕಾರ ಮಂಡಿಸಿದ ಮಸೂದೆಗಳನ್ನು ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸುತ್ತಿರುವುದು ಇದು ಮೊದಲೇನಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.