ಕೊಪ್ಪಳ: ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ
ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.

ಕೊಪ್ಪಳ: ತೊಗಲುಗೊಂಬೆಯಾಟದಲ್ಲಿ ಅದ್ವೀತಿಯ ಸಾಧನೆಗಾಗಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರ ನೀವಾಸಕ್ಕೆ ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಶನಿವಾರ ಭೇಟಿ ನೀಡಿದರು.
ಬಳಿಕ ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.
ಭೀಮವ್ವ ಹಾಗೂ ಅವರ ಕುಟುಂಬದವರು ಹಾಡಿದ ಹಾಡುಗಳನ್ನು ಆಲಿಸಿದ ರಾಜ್ಯಪಾಲರು, ಮೇಘಾಲಯದ ರಾಜಭವನದಲ್ಲಿ ಈ ಕಲೆ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಇದೇ ಕಲಾವಿದರನ್ನು ಕರೆಯಿಸಬೇಕು ಎಂದು ತಮ್ಮ ವಿಶೇಷ ಕರ್ತವ್ಯಾಧಿಕಾರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ, ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ, ಬಸವರಾಜ ದಡೆಸುಗೂರು ಅಳವಂಡಿ ಮತ್ತಿತರರು ಉಪಸ್ಥಿತರಿದ್ದರು.

'ಪದ್ಮಶ್ರೀ' ಕಳೆ: ಗೊಂಬೆಯಾಟ ಕಲೆಯನ್ನು ಜೀವಂತವಾಗಿರಿಸಿದ 96 ವರ್ಷದ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


