ಬೆಂಗಳೂರು: ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ; ಶಾಸಕ ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದ ಹೈದರ್!
ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ.

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.
ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಹೈದರ್ ಅಲಿ ಮೃತಪಟ್ಟಿದ್ದನು. ವಿಚಾರ ತಿಳಿದು ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಝಳಪಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



