ರಾಜ್ಯ

ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ

ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ
ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು
Published On :

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ. ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು ಆವರಿಸಿದ್ದು, ದೇವಿಕೆರೆ, ಗೊಲ್ಲಹಳ್ಳಿ ಭಾಗದಲ್ಲಿ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ.

ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.

ಇಂದು ಬೆಳಿಗ್ಗೆ ಕೂಡ ಎರಡು ತಂಡ ಮಾಡಿ ಕೆಂಡ ಇದ್ರೆ ಅದನ್ನು ಆರಿಸಲು ಹೇಳಿದ್ವಿ. ಸದ್ಯಕ್ಕೆ ಡ್ರೋನ್ ಹಾರಿಸಿ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು. ಸಣ್ಣ ಕಿಡಿ ಇಡೀ ಕಾಡನ್ನೇ ನಾಶ ಮಾಡತ್ತದೆ ಹೀಗಾಗಿ ಸಾರ್ವಜನಿಕರು ಕಾಡಿನಲ್ಲಿ ಬಿಡಿ ಸಿಗರೇಟ್ ಸೇದಿ ಎಸೆಯಬೇಡಿ ಎಂದು ಮನವಿ ಅವರು ಮಾಡಿದರು.

ಅದೃಷ್ಟವಶಾತ್ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ. ಬೆಳಿಗ್ಗೆ ನಮ್ಮ ವಾಚರ್ ಕಣ್ಣಿಗೆ ಚಿರತೆ ಹಾಗೂ ಮರಿಗಳು ಬಿದ್ದಿದೆ. ಬೆಂಕಿ ಬಿದ್ದ ತಕ್ಷಣ ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಭಾಗಕ್ಕೆ ಹೋಗಿವೆ ಎಂದರು. ರಾತ್ರಿ 10 ಗಂಟೆಯೊಳಗೆ ದೇವಾಲಯಕ್ಕೆ ಹೋಗುವ ನಾಲ್ಕು ದ್ವಾರಗಳನ್ನು ಮುಚ್ಚುವ ಅರಣ್ಯ ಇಲಾಖೆಯು ಸಂಜೆ 6 ಗಂಟೆಗೆ ಗೇಟ್‌ಗಳನ್ನು ಮುಚ್ಚುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.