ಬಡವರ ಏಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಚಲುವರಾಯಸ್ವಾಮಿ
ಕೊಪ್ಪ ಕೆರೆಯಿಂದ ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಯಲು ಕಾಲುವೆ ಮತ್ತು ನಾಲೆಗಳ ನಿರ್ಮಾಣ ಸೇರಿದಂತೆ ನೀರಾವರಿ ಇಲಾಖೆಗೆ ಸುಮಾರು 100 ಕೋಟಿ ಹಣ ಬಿಡುಗಡೆಗೊಳಿಸಿ ಅಭಿವೃದ್ಧಿ ಮಾಡಲಾಗುವುದು.

ಮದ್ದೂರು: ಬಡವರ ಏಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಜೆಡಿಎಸ್, ಬಿಜೆಪಿಯವರ ಮಾತಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ಶನಿವಾರ ಕೊಪ್ಪ ಕೆರೆ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಹ ಮಹಿಳಾ ಫಲಾನುಭವಿಗಳಿಗೆ 2 ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಹಣ ಬಂದಿಲ್ಲ. ಆದರೆ ಆದಷ್ಟು ಬೇಗ ಯೋಜನೆಯಡಿ ಹಣ ಖಾತೆಗಳಿಗೆ ಜಮೆಯಾಗಲಿದೆ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.
ಕೊಪ್ಪ ಕೆರೆಯಿಂದ ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಯಲು ಕಾಲುವೆ ಮತ್ತು ನಾಲೆಗಳ ನಿರ್ಮಾಣ ಸೇರಿದಂತೆ ನೀರಾವರಿ ಇಲಾಖೆಗೆ ಸುಮಾರು 100 ಕೋಟಿ ಹಣ ಬಿಡುಗಡೆಗೊಳಿಸಿ ಅಭಿವೃದ್ಧಿ ಮಾಡಲಾಗುವುದು. ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಿಂದ ಕೊಪ್ಪದವರೆಗೆ ಜೋಡಿ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಕೊಪ್ಪವನ್ನು ಪಟ್ಟಣದ ಪಂಚಾಯಿತಿ ಮಾಡುವ ಸಂಬಂಧ ಅಧಿಕಾರಿಗಳ ಜತೆಗೆ ಚರ್ಚೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



