ಹಾಸನ: ಧರ್ಮಸ್ಥಳಕ್ಕೆ ಹೊರಟಿದ್ದ ಪಾದಯಾತ್ರಿಗಳ ಮೇಲೆ ಹರಿದ ಬಸ್; ಇಬ್ಬರ ದುರ್ಮರಣ
ಹಾಸನ ನಗರದ ಹೊರ ವಲಯದ ಎಚ್ ಕೆಎಸ್ ಇಂಟರನ್ಯಾಷನಲ್ ಶಾಲೆ ಬಳಿ ಘಟನೆ ನಡೆದಿದ್ದು, ಆತಂಕಗೊಂಡ ಬಸ್ ಚಾಲಕ ಪ್ರಯಾಣಿಕರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಹಾಸನ: ಶಿವರಾತ್ರಿಗಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ, ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ನಗರದ ಹೊರ ವಲಯದ ಎಚ್ ಕೆಎಸ್ ಇಂಟರನ್ಯಾಷನಲ್ ಶಾಲೆ ಬಳಿ ಘಟನೆ ನಡೆದಿದ್ದು, ಆತಂಕಗೊಂಡ ಬಸ್ ಚಾಲಕ ಪ್ರಯಾಣಿಕರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಹಾಸನ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಬಸ್ ಜಪ್ತಿ ಮಾಡಿದ್ದಾರೆ. ಚೆನ್ನೈಗೆ ಹೋಗಬೇಕಿದ್ದ ಪ್ರಯಾಣಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊರಟಿದ್ದವರ ಮೇಲೆ ಅಪ್ಪಳಿಸಿದೆ. ಈ ವೇಳೆ ಒಬ್ಬಾತ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬಾತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತೊಬ್ಬನ ಸ್ಥಿತಿಯೂ ಗಂಭೀರವಾಗಿದ್ದು ಆತನಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



