ಲೋಕಾಯುಕ್ತ Dysp ಎಂದು ಹೇಳಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್: ಬೆಳಗಾವಿ ಮೂಲದ ವ್ಯಕ್ತಿ ಬಂಧನ
ಬೆಳಗಾವಿ ಮೂಲದ 56 ವರ್ಷದ ಮುರ್ಗಪ್ಪ ನಿಂಗಪ್ಪ ಕುಮಾರ್ ಎಂಬಾತ ಕೂಡ ಇದೇ ರೀತಿಯ ಅಪರಾಧಗಳನ್ನು ಈ ಹಿಂದೆಯೂ ಮಾಡಿರುವ ಇತಿಹಾಸವನ್ನು ಹೊಂದಿದ್ದಾನೆ

ಬೆಂಗಳೂರು: ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ಮುರುಗಪ್ಪ ನಿಂಗಪ್ಪ ಕುಮಾರ್ ಎಂದು ಗುರುತಿಸಲಾಗಿದೆ.
ಬೆಳಗಾವಿ ಮೂಲದ 56 ವರ್ಷದ ಮುರ್ಗಪ್ಪ ನಿಂಗಪ್ಪ ಕುಮಾರ್ ಎಂಬಾತ ಕೂಡ ಇದೇ ರೀತಿಯ ಅಪರಾಧಗಳನ್ನು ಈ ಹಿಂದೆಯೂ ಮಾಡಿರುವ ಇತಿಹಾಸವನ್ನು ಹೊಂದಿದ್ದಾನೆ. ಈ ಹಿಂದೆ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡಿದ್ದ. ಹಲವು ವರ್ಷಗಳ ಹಿಂದೆ ಸೇವೆಯಿಂದ ವಜಾಗೊಳಿಸಲಾಗಿತ್ತು .
ಆತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ. ಲೋಕಾಯುಕ್ತ ಅಧಿಕಾರಿ ಎಂದು ನಟಿಸಿದ್ದಕ್ಕಾಗಿ ಆತನನ್ನು ಈ ಹಿಂದೆ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕುಮಾರ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದು, ಲೋಕಾಯುಕ್ತ ಪೊಲೀಸ್ ಎಂದು ಸುಳ್ಳು ಹೇಳಿಕೊಂಡು, ಅಕ್ರಮ ಆಸ್ತಿ (ಡಿಎ) ಪ್ರಕರಣಗಳನ್ನು ದಾಖಲಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಎಂದು ಲೋಕಾಯುಕ್ತ ಡಿವೈಎಸ್‌ಪಿ ಬಸವರಾಜ್ ಆರ್ ಮಗದಮ್ ದೂರು ದಾಖಲಿಸಿದ ನಂತರ ಹೊಸ ಪ್ರಕರಣ ದಾಖಲಿಸಲಾಗಿದೆ, ಆತ ಅವರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



