ರಾಯಚೂರು, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣ ಪತ್ತೆ; ಆರೋಗ್ಯ ಇಲಾಖೆ ಕಟ್ಟೆಚ್ಚರ
ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರು: ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ನಂತರ, ಆರೋಗ್ಯ ಇಲಾಖೆ ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ರಾಯಚೂರಿನ ಮಾನ್ವಿ ತಾಲ್ಲೂಕು, ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿಯ ಸಂಡೂರು ತಾಲ್ಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ (H5N1 ಏವಿಯನ್ ಇನ್ಫ್ಲುಯೆಂಜಾ) ಕಂಡುಬಂದಿದ್ದು, ಹಲವಾರು ಕೋಳಿಗಳು ಸಾವಿಗೀಡಾಗಿವೆ. ಆದರೆ, ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ಹೇಳಿದರು.
ಪಶು ಸಂಗೋಪನಾ ಇಲಾಖೆ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್ನ ಕೇಂದ್ರ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಹಕ್ಕಿ ಜ್ವರದಿಂದ ಪಕ್ಷಿಗಳು ಸಾವಿಗೀಡಾಗಿರುವುದಾಗಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಹಕ್ಕಿ ಜ್ವರ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಪಶುಸಂಗೋಪನಾ ಇಲಾಖೆಯು ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದ ಸ್ಥಳದ ಸುತ್ತಲಿನ 3 ಕಿ.ಮೀ ಪ್ರದೇಶದಲ್ಲಿನ ಕೋಳಿಗಳನ್ನು ಸಾಮೂಹಿಕವಾಗಿ ಕೊಲ್ಲಲು ನಿರ್ಧರಿಸಲಾಗಿದೆ.
'ನಾವು ಕಣ್ಗಾವಲು ಹೆಚ್ಚಿಸಿದ್ದೇವೆ ಮತ್ತು ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ಹತ್ತಿರದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳ ಸೌಲಭ್ಯಗಳನ್ನು ಸ್ಥಾಪಿಸಿದ್ದೇವೆ' ಎಂದು ಅವರು ಹೇಳಿದರು.
ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ. ರಾಜ್ಯದ ಆರೋಗ್ಯ ಮತ್ತು ಪಶುಸಂಗೋಪನೆ ಇಲಾಖೆಗಳು ಜಂಟಿಯಾಗಿ ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



