ವಸತಿ ಯೋಜನೆಗಳ ಮೇಲಿನ ಶೇಕಡಾ 18 ಜಿಎಸ್‌ಟಿ: ರದ್ದು ಕೋರಿ ಸದ್ಯದಲ್ಲೇ ಪ್ರಧಾನಿಗೆ ರಾಜ್ಯ ಸರ್ಕಾರ ಮನವಿ
ರಾಜ್ಯದಲ್ಲಿ 2,865 ಕೊಳೆಗೇರಿಗಳಿದ್ದು, ಅದರಲ್ಲಿ 635 ಬೆಂಗಳೂರಿನಲ್ಲಿವೆ. ಈ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 3,682 ಕೋಟಿ ರೂಪಾಯಿ ಕೇಳಿ ಪ್ರಸ್ತಾವನೆ ಸಲ್ಲಿಸಿದೆ.

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು ಜಿಎಸ್‌ಟಿ ಜಾರಿಯಾಗಿರುವುದರಿಂದ ಫಲಾನುಭವಿಗಳು ಮನೆ ನಿರ್ಮಾಣಕ್ಕೆ 1.5 ಲಕ್ಷ ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿದ್ದು, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹೊರೆಯಾಗಿದೆ ಎಂದರು.
ರಾಜ್ಯದಲ್ಲಿ 2,865 ಕೊಳೆಗೇರಿಗಳಿದ್ದು, ಅದರಲ್ಲಿ 635 ಬೆಂಗಳೂರಿನಲ್ಲಿವೆ. ಈ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 3,682 ಕೋಟಿ ರೂಪಾಯಿ ಕೇಳಿ ಪ್ರಸ್ತಾವನೆ ಸಲ್ಲಿಸಿದೆ. ಈ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಲು ನಿರ್ಧರಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 45,124 ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಅದರಲ್ಲಿ 8,287 ಮನೆಗಳನ್ನು ಪೂರ್ಣಗೊಳಿಸಿದ್ದೇವೆ, 31,626 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದರು.
ರಸ್ತೆ ಸೌಕರ್ಯ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಸಭೆಯಲ್ಲಿ ಈ ಕುರಿತು ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಈ ಸೌಲಭ್ಯ ಕಲ್ಪಿಸಲು 660 ಕೋಟಿ ರೂಪಾಯಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಈ ಮೊತ್ತವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ 171 ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಜಮೀರ್ ಅಹಮದ್ ಹೇಳಿದರು. ಕೇಂದ್ರ ಸರ್ಕಾರವು 60:40 ಅನುಪಾತದಲ್ಲಿ ಹಣವನ್ನು ಬಿಡುಗಡೆ ಮಾಡಿದರೆ, ನಾವು ಕಾಲೊನಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



