Bengaluru: CCB ಭರ್ಜರಿ ಕಾರ್ಯಾಚರಣೆ; 2.25 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಟ್ಯಾಟೂ ಕಲಾವಿದ ಬಂಧನ
ಖಚಿತ ಮಾಹಿತಿ ಮೇರೆಗೆ ರಕ್ಷಿತ್ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, 3.55 ಕೆಜಿ ಹೈಡ್ರೋ ಗಾಂಜಾ, 16.65 ಕೆಜಿ ಗಾಂಜಾ, 40 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 130 ಗ್ರಾಂ ಚರಸ್ ಸೇರಿದಂತೆ 2.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದು, ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ 2.25 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಟ್ಯಾಟೂ ಕಲಾವಿದನೊಬ್ಬನನ್ನು ಬಂಧನಕ್ಕೊಳಪಡಿಸಿದ್ದಾರೆ.
ಯಲಹಂಕದ ರಕ್ಷಿತ್(31) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತವನೀಶ್ ಅಲಿಯಾಸ್ ಈಶಾ ತಲೆಮರೆಸಿಕೊಂಡಿದ್ದು, ಈತನಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ರಕ್ಷಿತ್ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, 3.55 ಕೆಜಿ ಹೈಡ್ರೋ ಗಾಂಜಾ, 16.65 ಕೆಜಿ ಗಾಂಜಾ, 40 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 130 ಗ್ರಾಂ ಚರಸ್ ಸೇರಿದಂತೆ 2.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಸದ್ಯ ತಲೆಮರೆಸಿಕೊಂಡಿರುವ ಯಲಹಂಕದ ನಿವಾಸಿ ತವನೀಶ್ ಎಂಬಾತ ರಕ್ಷಿತ್ ಜೊತೆ ಸೇರಿ ಬೇರೆ ರಾಜ್ಯಗಳಿಂದ ಹಾಗೂ ಥಾಯ್ಲೆಂಡ್‌ನಿಂದ ಈ ಮಾದಕ ದ್ರವ್ಯಗಳನ್ನು ತರಿಸಿಕೊಂಡಿದ್ದ ಎನ್ನಲಾಗಿದೆ.
ಇವರಿಬ್ಬರು ಹೊಸ ವರ್ಷದ ಸಂಭ್ರಮಾಚರಣೆಯ ಸಿದ್ಧತೆಗಾಗಿ ಡ್ರಗ್ಸ್ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಏತನ್ಮಧ್ಯೆ, ನಗರದಾದ್ಯಂತ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಪೊಲೀಸರು 17 ಆರೋಪಿಗಳನ್ನು ಬಂಧಿಸಿ 13 ಲಕ್ಷ ಮೌಲ್ಯದ 30 ಕೆಜಿ ಗಾಂಜಾ ಮತ್ತು 9.5 ಲಕ್ಷ ಮೌಲ್ಯದ 150 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



