ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಗಂಡು ಮಕ್ಕಳಿಬ್ಬರ ದುರ್ಮರಣ
ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ.

ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ತಾಯಿ ಮತ್ತು ಗಂಡು ಮಕ್ಕಳಿಬ್ಬರು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ. ಮೃತರನ್ನು 28 ವರ್ಷದ ಗೀತಾ ಬಡಗಿ, ಮಕ್ಕಳಾದ 6 ವರ್ಷದ ಶ್ರವಣ್ ಮತ್ತು 4 ವರ್ಷದ ಶರಣ್ ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ಗೀತಾ ತನ್ನ ತಂದೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



