ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಅನುಮೋದನೆ
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1 ರಿಂದ 26 ಅನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನೂಳಿದ ವಾರ್ಡ್ ನಂ.27 ರಿಂದ 82 ರವರೆಗಿನ ಪ್ರದೇಶಗಳನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆಯನ್ನಾಗಿ ಮುಂದುವರೆಸಲು ಅನುಮತಿ ನೀಡಲಾಗಿದೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ.
2014ರಲ್ಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನ ಆಗ್ರಹಿಸಿದ್ದರು. ಪಾಲಿಕೆಯ ರಚನೆಗೆ 3.5 ಲಕ್ಷ ಜನಸಂಖ್ಯೆಯ ಮೇಲಿರಬೇಕು. ಹೀಗಾಗಿ, ಇದೀಗ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಿಸಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



