The New Indian Express ಪತ್ರಕರ್ತ ನೌಶಾದ್ ಬಿಜಾಪುರ ಸೇರಿ 14 ಮಂದಿಗೆ ಅಭಿವೃದ್ಧಿ- ಪರಿಸರ ಪತ್ರಿಕೋದ್ಯಮ ಪ್ರಶಸ್ತಿ
ವಾರ್ತಾ ಇಲಾಖೆ ಆಯುಕ್ತರ ಅಧ್ಯಕ್ಷತೆಯ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿದೆ.
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ನೌಶಾದ್ ಬಿಜಾಪುರ್ ಅವರನ್ನು 2021 ರ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಾರ್ತಾ ಇಲಾಖೆ ಆಯುಕ್ತರ ಅಧ್ಯಕ್ಷತೆಯ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.
ರಾಜ್ಯ ಸರ್ಕಾರವು 2017-2023ರ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗಾಗಿ 14 ಹೆಸರುಗಳನ್ನು ಪ್ರಕಟಿಸಿದೆ. ಪ್ರಶಸ್ತಿ ಪುರಸ್ಕೃತರು 1 ಲಕ್ಷ ರೂಪಾಯಿ ನಗದು ಪಡೆಯಲಿದ್ದಾರೆ. ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರಲ್ಲಿ ಚಿ.ಜಾ ರಾಜೀವ್ (2017), ದೇವಯ್ಯ ಗುತ್ತೇದಾರ್ (2018), kannadaprabha.com ಅಂಕಣಕಾರ ಗಿರೀಶ್ ಲಿಂಗಣ್ಣ (2019), ಯೋಗೇಶ್ ಎಂಎನ್ (2020), ನೌಶಾದ್ ಬಿಜಾಪುರ (2021), ಸತೀಶ್ ಜಿಟಿ (2022) ಮತ್ತು ಎಸ್ ಗಿರೀಶ್ ಬಾಬು (2023) ಸೇರಿದ್ದಾರೆ.
ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರಲ್ಲಿ ವಿಜಯಲಕ್ಷ್ಮಿ ಶಿಬರೂರು (2017), ಬಿಎಂಟಿ ರಾಜೀವ್ (2018), ವಿನೋದ ನಾಯ್ಕ್ (2019), ಮಾಲ್ತೇಶ್ ಅಂಗೂರ (2020), ಸುಧೀರ್ ಶೆಟ್ಟಿ (2021), ಮಲ್ಲಿಕಾರ್ಜುನ್ ಹೊಸಪಾಳ್ಯ (2022) ಮತ್ತು ಆರ್ ಮಂಜುನಾಥ್ (20) ಸೇರಿದ್ದಾರೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ. ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳನ್ನು ತಿಳಿಸಿ ಆಶೀರ್ವದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



