ರಾಜ್ಯ

ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ಹಂಪಿ ಉತ್ಸವ

ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮೂರು ದಿನಗಳ ಕಾರ್ಯಕ್ರಮಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ.

ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ಹಂಪಿ ಉತ್ಸವ
ಸಚಿವ ಜಮೀರ್ ಅಹ್ಮದ್ ಖಾನ್
Published On :

ಬೆಂಗಳೂರು: ವಿಜಯ ಉತ್ಸವ ಎಂದೂ ಕರೆಯಲ್ಪಡುವ ಹಂಪಿ ಉತ್ಸವವು ಈ ವರ್ಷ ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮೂರು ದಿನಗಳ ಕಾರ್ಯಕ್ರಮಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.28ರಂದು ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದು, ಮಾರ್ಚ್ 1 ಮತ್ತು 2ರಂದು ಕಾರ್ಯಕ್ರಮಗಳು ನಡೆಯಲಿವೆ. ಮಾರ್ಚ್ 2ರಂದು ಉತ್ಸವ ಮುಕ್ತಾಯವಾಗಲಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಹಂಪಿ ಉತ್ಸವಕ್ಕೆ ಸಿದ್ಧತೆ ಆರಂಭಿಸುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚಿಸಿದ್ದಾರೆ.

ಈ ಬಾರಿಯೂ ಅದ್ಧೂರಿ ಹಾಗೂ ಸಂಪ್ರದಾಯವಾಗಿ ಹಂಪಿ ಉತ್ಸವ ಆಚರಿಸಲಾಗುವುದು. ಕಳೆದ ವರ್ಷ ಪೆಬ್ರುವರಿ 2ರಿಂದ 4ರವರೆಗೆ ಹಂಪಿ ಉತ್ಸವ ನಡೆದಿತ್ತು. ಈ ವರ್ಷ ಬಹುತೇಕ ಒಂದು ತಿಂಗಳು ವಿಳಂಬವಾಗಿ ಉತ್ಸವ ನಡೆಯುತ್ತಿದೆ. ಮಾರ್ಚ್ ತಿಂಗಳು ಬಿರು ಬೇಸಿಗೆಯ ಸಮಯ ಆಗಿದ್ದರೈ ಕಾರ್ಯಕ್ರಮಗಳು ನಡೆಯುವುದು ಸಂಜೆ ಹೊತ್ತಲ್ಲಿ. ಹೀಗಾಗಿ ಯಾವುದೇ ಸಮಸ್ಯೆ ಆಗದು ಎಂದರು.

ಹಂಪಿ ಉತ್ಸವವು ಹಂಪಿಯಲ್ಲಿ ನಡೆಯುವ ವಾರ್ಷಿಕ ಸಾಂಸ್ಕೃತಿಕ ಉತ್ಸವವಾಗಿದೆ. ಈ ಉತ್ಸವವನ್ನು ಕರ್ನಾಟಕ ಸರ್ಕಾರ ಆಯೋಜಿಸುತ್ತದೆ ಮತ್ತು ವಿಜಯನಗರ ಸಾಮ್ರಾಜ್ಯದ ವೈಭವವನ್ನು ಆಚರಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.