ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮದ್ಯ ಸೇವಿಸುವಂತೆ ಮಹಿಳೆಗೆ ಒತ್ತಾಯ: ಪ್ರಕರಣ ದಾಖಲು
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾರತ್ತಹಳ್ಳಿಯ ಪಬ್'ಗೆ ಮಹಿಳೆ ಮಂಗಳವಾರ ರಾತ್ರಿ ಗೆಳೆಯನೊಂದಿಗೆ ಭೇಟಿ ನೀಡಿದ್ದರು.

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪಬ್'ಗೆ ಹೋಗಿದ್ದ ಮಹಿಳಯೊಬ್ಬರಿಗೆ ಯುವಕನೊಬ್ಬ ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತಾಗಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಈ ಸಂಬಂಧ ಮಹಿಳೆ ದೂರು ದಾಖಲಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾರತ್ತಹಳ್ಳಿಯ ಪಬ್'ಗೆ ಮಹಿಳೆ ಮಂಗಳವಾರ ರಾತ್ರಿ ಗೆಳೆಯನೊಂದಿಗೆ ಭೇಟಿ ನೀಡಿದ್ದರು. ಈ ವೇಳೆ ಪಾನಮತ್ತನಾಗಿದ್ದ ಯುವಕ ಮಹಿಳೆ ಬಳಿ ಬಂದು ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ನಡುವೆ ಸ್ಥಳಕ್ಕೆ ಬಂದ ಬೌನ್ಸರ್ ಗಳು ಯುವಕನನ್ನು ಪಬ್ ನಿಂದ ಹೊರಗೆ ಕಳುಹಿಸಿದ್ದಾರೆ. ಆದರೆ, ಮಹಿಳೆ ಆತನನ್ನು ಪಬ್ ನಿಂದ ಹೊರಗೆ ಕಳುಹಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
ಬುಧವಾರ ಬೆಳಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಪಬ್‌ನಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದು, ತನಿಖೆಗಳು ಆರಂಭಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



