ರಾಜ್ಯ

ಸಚಿವ ಎಂಬಿ ಪಾಟೀಲ್ ಗೆ ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ; ಜನವರಿ 12 ರಂದು ಪ್ರದಾನ

ಜನವರಿ 12 ರಂದು ಸಂಜೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಸಚಿವ ಎಂಬಿ ಪಾಟೀಲ್ ಗೆ ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ; ಜನವರಿ 12 ರಂದು ಪ್ರದಾನ
ಎಂಬಿ ಪಾಟೀಲ್
Published On :

ಬೆಂಗಳೂರು: ಬೆಂಗಳೂರು ಪ್ರೆಸ್‌ ಕ್ಲಬ್‌ ಪ್ರತಿ ವರ್ಷ ನೀಡುವ ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿ, ವಿಶೇಷ ಪ್ರಶಸ್ತಿ ಮತ್ತು ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ರಾಜ್ಯ ಕೈಗಾರಿಕಾ ವಲಯಕ್ಕೆ ನೀಡುತ್ತಿರುವ ಉತ್ತೇಜನವನ್ನು ಪರಿಗಣಿಸಿ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಪ್ರಯುಕ್ತ ಇಂಧನ ಸಚಿವ ಕೆಜೆ ಜಾರ್ಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಳಾಕರ್ ಹಾಗೂ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 12 ರಂದು ಸಂಜೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ 50 ಸಾಧಕ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.